ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆ

ಮಡಿಕೇರಿ :-ಸೆಪ್ಟೆಂಬರ್, 15 ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಶಾಲಾ-ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಾಗೂ ಬೈಕ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.
ಚಿತ್ರ ಕಲಾ ಸ್ಪರ್ಧೆ (ಪೇಯಿಟಿಂಗ್), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಛಾಯಾಚಿತ್ರ ಸ್ಪರ್ಧೆ(ಪೊಟೋಗ್ರಫಿ), ಉನ್ನತ ಶಿಕ್ಷಣ ಇಲಾಖೆ ಮತ್ತು ಭಾಷಣ ಸ್ಪರ್ಧೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು. ಸೆಪ್ಟೆಂಬರ್, 15 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಕಾರ್ಯಕ್ರಮ ಹಾಗೂ ಬೆಳಗ್ಗೆ 7.30 ಗಂಟೆಗೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ಸೈಕಲ್ ಜಾಥಾ ನಡೆಯಲಿದೆ. ಈ ಜಾಥಾದಲ್ಲಿ ಪಾಲ್ಗೊಳ್ಳುವವರು ಸ್ವಂತ ಬೈಕ್ ಹಾಗೂ ಸೈಕಲ್ ಹೊಂದಿದ್ದು, ಆಸಕ್ತರು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಹತ್ತಿರ, ಕೊಡಗು ಜಿಲ್ಲೆಯ ಮಡಿಕೇರಿ ಇಲ್ಲಿಗೆ ಭೇಟಿ ನೀಡಿ ತಮ್ಮ ಹೆಸರನ್ನು ಸೆಪ್ಟೆಂಬರ್, 13 ರ ಸಂಜೆ 5.30 ರೊಳಗೆ ನೋಂದಾಯಿಸಿಕೊಳ್ಳುವುದು.
ನಂತರ ಗಾಂಧಿ ಭವನ, ಮಡಿಕೇರಿ ಇಲ್ಲಿ ಉಸ್ತುವಾರಿ ಸಚಿವರು, ಕೊಡಗು ಜಿಲ್ಲೆ ರವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಯ ಮುಖಂಡರು, ಸರ್ಕಾರಿ/ ಸರ್ಕಾರೇತರ ಸಂಸ್ಥೆಯ ಅಧಿಕಾರಿ/ ನೌಕರರು ಭಾಗವಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531 ಹಾಗೂ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-9480843156 ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.