ಸೆ.26 ಮತ್ತು, 27ರಂದು ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ

ಸೆ.26 ಮತ್ತು, 27ರಂದು ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ

ಮಡಿಕೇರಿ: ಯುವದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಯುವಕರ ತಂಡ ಸಜ್ಜಾಗಿದ್ದು, ಸೆ.೨೬, ೨೭ರಂದು ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.೨೬ರಂದು ಶುಕ್ರವಾರ ಬಾಲ ಭವನ ಸಭಾಂಗಣದಲ್ಲಿ ಉದ್ಯೋಗ ವಿನಿಮಯ ಕಚೇರಿ ಇವರ ಸಹಭಾಗಿತ್ವದಲ್ಲಿ ಮೊದಲನೇ ಬಾರಿಗೆ ಯುವದಸರದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳೀಯ ಹೋಟೆಲ್ ಕಂಪನಿಗಳು ಕೂಡ ಇದರಲ್ಲಿ ಭಾಗವಹಿಸುತ್ತಿವೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

 ಸೆ.೨೬ರಂದು ೧೧ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಶ್ವಾನ ಪ್ರದರ್ಶನ, ಸೆ.೨೭ ಶನಿವಾರದಂದು ಬೆಳಗ್ಗೆ ೭.೩೦ ಗಂಟೆಗೆ ನಗರದ ಸುದರ್ಶನ ವೃತ್ತದಿಂದ ಸೈಕಲ್ ಜಾಥಾ, ಬೆಳಗ್ಗೆ ೧೦.೩೦ ಗಂಟೆಗೆ ಸೂಪರ್ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಂಜೆ ೬ ಗಂಟೆಗೆ ಸರಿಯಾಗಿ ದೀಪ ಬೆಳಗುವುದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಆರಂಭವಾಗಲಿದೆ. ಸಂಜೆ ೭ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕವನ್ ಕೊತ್ತೋಳಿ ವಹಿಸಲಿದ್ದು, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್.ಎಂ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

 ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹಾರೋಜ್ ಖಾನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಐಶ್ವರ್ಯ ರಂಗರಾಜನ್ ಹಾಡಿನ ಮೂಲಕ ಜನರನ್ನು ರಂಜಿಸಲುದ್ದು, ಲೈವ್ ಮಸಿಕ್, ಡಿಜೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಯುವ ದಸರಾ ಸಮಿತಿ ಉಪಾಧ್ಯಕ್ಷ ಟಿ.ಆರ್.ಅರ್ಜುನ್, ಪ್ರಧಾನ ಕಾರ್ಯದರ್ಶಿ ಕೆ.ಶರಣ್, ಖಜಾಂಚಿ ಸುನೀಲ್, ಕಾರ್ಯದರ್ಶಿ ಲಿನೇಶ್, ಸಂಘಟನಾ ಕಾರ್ಯದರ್ಶಿ ಪವಿತ್ರ ಉಪಸ್ಥಿತರಿದ್ದರು.