ಮಲಯಾಳಂ ಚಿತ್ರರಂಗದ ಹಿರಿಯ ನಟ - ನಿರ್ಮಾಪಕ ಶ್ರೀನಿವಾಸನ್ ನಿಧನ

Dec 20, 2025 - 10:28
Dec 20, 2025 - 10:36
 0  1.7k
ಮಲಯಾಳಂ ಚಿತ್ರರಂಗದ ಹಿರಿಯ ನಟ - ನಿರ್ಮಾಪಕ ಶ್ರೀನಿವಾಸನ್ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಬರಹಗಾರರಾದ ಶ್ರೀನಿವಾಸನ್ (69) ಅವರು ಶನಿವಾರ ಬೆಳಿಗ್ಗೆ ನಿಧನರಾದರು.

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉದಯಂಪೀರೂರಿನ ತಮ್ಮ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ತ್ರಿಪ್ಪುನಿತುರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1956ರ ಏಪ್ರಿಲ್‌ 6ರಂದು ಕೇರಳದ ತಲಶ್ಶೇರಿ ಸಮೀಪದ ಪಟ್ಯಂನಲ್ಲಿ ಜನಿಸಿದ ಶ್ರೀನಿವಾಸನ್ ಅವರು ಕದಿರೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದ್ದರು. ಬಳಿಕ ಮಟ್ಟನೂರಿನ ಪಿಆರ್‌ಎನ್‌ ಎಸ್‌ಎಸ್‌ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದರು.

1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಮಲಯಾಳಂ ಸಿನಿರಂಗದ ಪ್ರಮುಖ ನಟರಾಗಿ ಗುರುತಿಸಿಕೊಂಡರು. ಸುಮಾರು ಐದು ದಶಕಗಳ ವೃತ್ತಿಜೀವನದಲ್ಲಿ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ನಟನೆಯ ಜೊತೆಗೆ ನಿರ್ಮಾಪಕ, ನಿರ್ದೇಶಕ ಹಾಗೂ ಬರಹಗಾರರಾಗಿ ಕೂಡ ಶ್ರೀನಿವಾಸನ್ ಅವರು ಗಮನಾರ್ಹ ಕೊಡುಗೆ ನೀಡಿದ್ದರು. ಆಧುನಿಕ ಮಲಯಾಳಂ ಸಿನಿಮಾವಿನ ರೂಪುಗೊಳಿಸುವಿಕೆಯಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಅವರ ನಿಧನದಿಂದ ಮಲಯಾಳಂ ಚಿತ್ರರಂಗಕ್ಕೆ ಅಪಾರ ನಷ್ಟವಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 7
Wow Wow 0