ಪಾಲಿಬೆಟ್ಟ ಆಟೋ ಚಾಲಕರ ಸಂಘದಿಂದ ವಿಜು ಸುಬ್ರಮಣಿಗೆ ಸನ್ಮಾನ

ಪಾಲಿಬೆಟ್ಟ ಆಟೋ ಚಾಲಕರ ಸಂಘದಿಂದ ವಿಜು ಸುಬ್ರಮಣಿಗೆ ಸನ್ಮಾನ

ಸಿದ್ದಾಪುರ :-ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾವೇರಿ ರತ್ನ ಪ್ರಶಸ್ತಿ ಸ್ವೀಕರಿಸಿದ ಮಾಜಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರು ಹಾಗೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೂಕೊಂಡ ವಿಜು ಸುಬ್ರಮಣಿ ಅವರನ್ನ ಪಾಲಿಬೆಟ್ಟದ ಆಟೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

 ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜು ಸುಬ್ರಮಣಿ ಆಟೋ ಚಾಲಕರು ಹಲವಾರು ಸಮಸ್ಯೆಗಳ ನಡುವೆ ಮೂಲಸೌಕರ್ಯ ವಂಚಿತರಾಗಿ ಬದುಕು ಸಾಗಿಸುತ್ತಿದ್ದು ಸರ್ಕಾರ ಚಾಲಕರು ಹಾಗೂ ಅವರ ಕುಟುಂಬಗಳಿಗೆ ಅಗತ್ಯ ವಿಶೇಷ ಸೌಲಭ್ಯಗಳನ್ನು ನೀಡಿ ಮುಂದೆ ತರುವ ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದ ಅವರು ಕಾಡುಪ್ರಾಣಿಗಳ ಭಯದ ನಡುವೆ ಆಟೋರಿಕ್ಷಾ ಚಲಾಯಿಸಿ ದಿನನಿತ್ಯದ ಜೀವನ ನಡೆಸಬೇಕಾಗಿದೆ ಪಾಲಿಬೆಟ್ಟ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ಇಲ್ಲದೆಯೂ ಕಾಡು ಪ್ರಾಣಿಗಳ ಭಯದ ನಡುವೆ ಪ್ರಯಾಣಿಕರನ್ನು ಕರೆದು ಹೋಗಿ ಮನೆಗೆ ಬಿಟ್ಟು ಬರುತ್ತಾರೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ರಸ್ತೆಗಳು ಹಾಳಾಗಿದ್ದು ಆಟೋ ಸೇರಿದಂತೆ ಇತರ ವಾಹನ ಸಂಚಾರಕ್ಕೂ ತೊಡಕುಂಟಾಗಿದೆ. ದಿನನಿತ್ಯ ದುಡಿದ ಹಣವನ್ನು ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವ ಆಟೋಗಳಿಗೆ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡು ಪ್ರಾಣಿಗಳ ಹಾವಳಿಯನ್ನ ಶಾಶ್ವತವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣದ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಆಟೋ ಚಾಲಕರಿಗೆ ವಿಶೇಷ ಭದ್ರತಾ ಸೌಲಭ್ಯವನ್ನು ನೀಡಬೇಕೆಂದು ಒತ್ತಾಯಿಸಿದರು.

ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ದೂಜಾ ವೇಗಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾಜಪ್ಪ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಖಜಾಂಚಿ ಶಿವಶಂಕರ, ಕ್ರೀಡಾ ಸಮಿತಿ ಅಧ್ಯಕ್ಷ ಪವನ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ಚಾಲಕರು ಹಾಜರಿದ್ದರು.