ವಿರಾಜಪೇಟೆ: ವ್ಯೂ ಪಾಯಿಂಟ್ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎ.ಎಸ್ ಪೊನ್ನಣ್ಣ
ವಿರಾಜಪೇಟೆ :ಪುರಸಭಾ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ಪಡೆದಿರುವ, ವ್ಯೂ ಪಾಯಿಂಟ್ ಸ್ಥಳದ ವೀಕ್ಷಣೆ ಹಾಗೂ ಪರಿಶೀಲನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಕೈಗೊಂಡರು.
ಕ್ಷೇತ್ರದ ಸರ್ವಾಂಗೀನ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುತ್ತಾ, ಶ್ರಮಿಸುತ್ತಿರುವ ಶಾಸಕರು, ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಸಿಗರನ್ನು ಸೆಳೆಯಲು ಸೂಕ್ತ ಸ್ಥಳದಲ್ಲಿ ವ್ಯೂ ಪಾಯಿಂಟ್ ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದರು. ಇದಕ್ಕೆ ಸ್ಥಳವನ್ನು ಸಹ ಗುರುತಿಸಿದ್ದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಈಗ ಸರ್ಕಾರದಿಂದ ₹ 1 ಕೋಟಿ 74 ಲಕ್ಷ ಅನುಮೋದನೆ ದೊರಕಿದ್ದು, ಸ್ಥಳೀಯ ಪ್ರಮುಖರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು, ತಹಶೀಲ್ದಾರ್ ಪ್ರವೀಣ್, ಕಂದಾಯ ಅಧಿಕಾರಿ ಹರೀಶ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.