ವಿರಾಜಪೇಟೆ:ಬೆಟೋಳಿಯಲ್ಲಿ ಸಮುದಾಯ ಭವನ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ತಾಲ್ಲೂಕಿನ ಬೆಟೋಳಿಯ ರಾಮನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಸ್ಥಳ ವೀಕ್ಷಣೆ ಹಾಗೂ ಪರಿಶೀಲನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನಡೆಸಿದರು. ಮೂಲಸೌಕರ್ಯ ಕಲ್ಪಿಸುವುದರೊಂದಿಗೆ ಗ್ರಾಮಕ್ಕೆ ಅವಶ್ಯಕತೆ ಇರುವ ಸಮುದಾಯ ಭವನಕ್ಕಾಗಿ ಈ ಶಾಸಕರಲ್ಲಿ ಗ್ರಾಮಸ್ಥರು ತಮ್ಮ ಅಹವಾಲನ್ನು ಹೇಳಿಕೊಂಡಿದ್ದರು.ಸ.ಮುದಾಯ ಭವನ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ತೆರಳಿದ ಶಾಸಕರು ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ವರ್ಗಿಸ್, ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಯುವ ಅಧ್ಯಕ್ಷರಾದ ಪಟ್ಟಡ ರಕ್ಷಿತ್ ಚಂಗಪ್ಪ, ಶಬೀರ್, ಪಂಚಾಯಿತಿ ಸದಸ್ಯರಾದ ಅಮುಲುಕುಟ್ಟಂಡ ಕಟ್ಟಿ, ರಜಕ್, ಶಾಂತಿ, ಲತಾ, ಪಕ್ಷದ ಪ್ರಮುಖರು ಕುಂದಚೀರ ಮಂಜು ದೇವಯ್ಯ, ಮಂಜುನಾಥ್,ಹರೀಶ್, ತಾಲೂಕು ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.