ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಕಾರು: ಮಾರ್ಗ ಮಧ್ಯೆ ಅಪಘಾತ ಸ್ಥಳ ವೀಕ್ಷಿಸಿ ಮಾಹಿತಿ ಪಡೆದ ಶಾಸಕ ಪೊನ್ನಣ್ಣ
admincoorgdaily
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ ವಿರಾಜಪೇಟೆ ಮುಖ್ಯರಸ್ತೆಯ ಚಿಕ್ಕಪೇಟೆ ಬಳಿ ನಡೆದಿದೆ. ಮೂರ್ನಾಡು ಬೇತ್ರಿ ಮಾರ್ಗವಾಗಿ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಮಾರುತಿ ಜೆನ್ ಕಾರು ಚಿಕ್ಕಪೇಟೆ ಪೆಟ್ರೋಲ್ ಬಂಕ್ ಬಳಿಯ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ 20 ಅಡಿ ಆಳದ ಗದ್ದೆಗೆ ಉರುಳಿ ಬಿದ್ದಿದೆ. ಅಪಘಾತದಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಇದೇ ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣಅವರು ಅಪಘಾತ ನಡೆದ ಸ್ಥಳದಲ್ಲಿ ಜನರನ್ನು ಕಂಡು ತಮ್ಮ ವಾಹನವನ್ನು ನಿಲ್ಲಿಸಿ ಅಪಘಾತದ ಸ್ಥಳವನ್ನು ವೀಕ್ಷಿಸಿ ಕಾರು ಚಾಲಕನ ಆರೋಗ್ಯದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.