ವಿರಾಜಪೇಟೆ:ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ, 5ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ನಾಚಪ್ಪ,ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಸದಸ್ಯರಾದ ರಾಫಿ, ಮತೀನ್, ಬೆನ್ನಿ ಆಗಷ್ಟಿನ್, ಅತಿಫ್ ಮನ್ನ, ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.