ವಿರಾಜಪೇಟೆ:ಕಲುಷಿತ ನೀರನ್ನು ಶುದ್ಧಗೊಳಿಸುವ ಯೋಜನೆಯ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಕೆದಮುಳ್ಳೂರು ಗ್ರಾಮ ಪಂಚಾಯಿತಿಯ, ಕೊಟೋಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು. ಕೊಟೋಳಿಯಲ್ಲಿ ಸೀವೇಜ್ ವೇಸ್ಟ್ ವಾಟರ್ ಗೆ ಕಾಯ್ದಿರಿಸಿದ ಸ್ಥಳ ಪರಿಶೀಲನೆ ಮಾಡಿದ ಶಾಸಕರು, ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಗ್ರಾಮಸ್ಥರಿಗೆ, ಕಾಮಗಾರಿಯ ವಿವರಣೆಯನ್ನು ನೀಡುತ್ತಾ, ಕಲುಷಿತ ನೀರನ್ನು ಶುದ್ಧಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕಲುಷಿತ ನೀರನ್ನು ಶುದ್ಧೀಕರಣಗೊಳಿಸಿದ ಬಳಿಕ, ಮರು ಬಳಕೆಗೆ ಯೋಗ್ಯವಾಗುವಂತೆ ಮಾಡುವ ಕಾಮಗಾರಿ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ನಾಚಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಫ್ರೀ ಉತ್ತಪ್ಪ, ಪಂಚಾಯತ್ ಸದಸ್ಯ ಇಸ್ಮಾಯಿಲ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.