ವಿರಾಜಪೇಟೆ:ಶಾಸಕ ಎಎಸ್ ಪೊನ್ನಣ್ಣ ಸಮ್ಮುಖದಲ್ಲಿ,ಡಾ.ಸುಭಾಷ್ ನಾಣಯ್ಯ ನೇತೃತ್ವದ ತಂಡ ಬಿಜೆಪಿ ‌ತೊರೆದು ಕಾಂಗ್ರೆಸ್ ಸೇರ್ಪಡೆ

Dec 23, 2025 - 13:50
Dec 23, 2025 - 23:02
 0  1.4k
ವಿರಾಜಪೇಟೆ:ಶಾಸಕ ಎಎಸ್ ಪೊನ್ನಣ್ಣ ಸಮ್ಮುಖದಲ್ಲಿ,ಡಾ.ಸುಭಾಷ್ ನಾಣಯ್ಯ ನೇತೃತ್ವದ ತಂಡ ಬಿಜೆಪಿ ‌ತೊರೆದು ಕಾಂಗ್ರೆಸ್ ಸೇರ್ಪಡೆ

ವಿರಾಜಪೇಟೆ' ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

    ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಸನ್ಮಾನ್ಯ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ನಡೆದ ಈ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ, ಡಾ. ಸುಭಾಷ್ ನಾಣಯ್ಯ ನೇತೃತ್ವದಲ್ಲಿ ಬಿಜೆಪಿಯ ಹಲವಾರು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಹಾಗೂ ಶಾಸಕರ ಜನಪರ ಕಾಳಜಿ ಹಾಗೂ ಕಾರ್ಯ ವೈಖರಿಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

   ಎಲ್ಲರಿಗೂ ಪಕ್ಷದ ಶಲ್ಯ ಹೊದಿಸಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡ ಮಾನ್ಯ ಶಾಸಕರು, ಸಮಾಜದ ಪರ ಚಿಂತನೆ ಬೆಳೆಸಿಕೊಂಡು ನಾಡಿನ ಏಳಿಗೆಗೆ ಶ್ರಮಿಸುವ ಉದ್ದೇಶದಿಂದ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಎಲ್ಲರನ್ನೂ ಸ್ವಾಗತಿಸುತ್ತಾ ಶುಭಕೋರಿದರು. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕೆಂದು ಸಲಹೆ ನೀಡಿದ ಶಾಸಕರು, ಒಳ್ಳೆಯ ಆಡಳಿತ ಹಾಗೂ ಜನಪರ ಕಾಳಜಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅರುಣ್ ಮಾಚಯ್ಯ, ಮಾಜಿ ಶಾಸಕಿ ಶ್ರೀಮತಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪಕ್ಷದ ಮುಖಂಡರು ಪ್ರಚಾರ ಸಮಿತಿಯ ಅಧ್ಯಕ್ಷರು ಟಿ ಪಿ ರಮೇಶ್, ಹಿರಿಯ ಮುಖಂಡರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀ ಕೊಲ್ಯದ ಗಿರೀಶ್, ಡಿಸಿಸಿ ಸದಸ್ಯರು ಅಬ್ದುಲ್ ರೆಹಮಾನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಮಿದೇರೀರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಶ್ರೀ ಇಸ್ಮಾಯಿಲ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು, ಸಾಮಾಜಿಕ ಜಾಲತಾಣದ ಅಧ್ಯಕ್ಷರು ಶ್ರೀ ಸೂರಜ್ ಹೊಸೂರು, ಸಾರ ಚಂಗಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟದ ಅಧ್ಯಕ್ಷರು ಶ್ರೀ ಹನೀಫ್, ಕೆಪಿಪಿಸಿ ಒಬಿಸಿ ಘಟದ ಉಪಾಧ್ಯಕ್ಷರು ಕೆ ಎಂ ಬಾಲಕೃಷ್ಣ, ಎಸ್ ಟಿ ಘಟದ ಅಧ್ಯಕ್ಷರು ಜಯೇಂದ್ರ, ಅಯ್ಯಪ್ಪ, ಪೊನ್ನಂಪೇಟೆ ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟ್ಟು ಮೊಣ್ಣಪ್ಪ, ವಿರಾಜಪೇಟೆ ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಪಕ್ಷದ ಎಲ್ಲಾ ಹಿರಿಯ ನಾಯಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು/ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು /ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಸರಕಾರ ನಾಮನಿರ್ದೇಶಿತ ಅಧ್ಯಕ್ಷರುಗಳು /ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಹಾಗೂ ಬೂತ್ ಮಟ್ಟದ ಅಧ್ಯಕ್ಷರುಗಳು/ ಪದಾಧಿಕಾರಿಗಳು, ಎಸ್ ಸಿ ಘಟದ ಅಧ್ಯಕ್ಷರುಗಳು, ಪದಾಧಿಕಾರಿಗಳು,ಅಲ್ಪಸಂಖ್ಯಾತರ ಘಟದ ಅಧ್ಯಕ್ಷರು, ಪದಾಧಿಕಾರಿಗಳು, ಒಬಿಸಿ ಘಟದ ಅಧ್ಯಕ್ಷರು ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು, ಯುವ ಕಾಂಗ್ರೆಸ್ ಘಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ ಹೆಚ್ಚಿನ ಸಂಖ್ಯೆ ಯಲ್ಲಿ ಸೇರಿದ ಕಾರ್ಯಕರ್ತರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0