Kodagu

ವಿರಾಜಪೇಟೆ:ಸರ್ಕಾರಿ ಆಸ್ಪತ್ರೆ ಶೌಚಾಲಯದಲ್ಲಿ ಗಂಡು ಭ್ರೂಣ ಪತ್ತೆ

admincoorgdaily

ವಿರಾಜಪೇಟೆ:ಸರ್ಕಾರಿ ಆಸ್ಪತ್ರೆ ಶೌಚಾಲಯದಲ್ಲಿ ಗಂಡು ಭ್ರೂಣ ಪತ್ತೆ

ವಿರಾಜಪೇಟೆ:ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸುಮಾರು 5 ತಿಂಗಳ ಗಂಡು ಮಗುವಿನ ಭ್ರೂಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ಭ್ರೂಣವನ್ನು ವಶಕ್ಕೆ ಪಡೆದು ಪೊಲೀಸರ ಸಮ್ಮುಖದಲ್ಲಿ ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಸಿಂಪಿ ತಿಳಿಸಿದ್ದಾರೆ.

 ಘಟನೆ ಕುರಿತು ಮಾಹಿತಿ ನೀಡಿದ ಅವರು, ಈ ಘಟನೆ ಗುರುವಾರ ಬೆಳಿಗ್ಗೆ ಸುಮಾರು 10.30 - 11 ಗಂಟೆಯ ವೇಳೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಯಿಂದ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಬಳಿಕ ನಗರ ಪೊಲೀಸ್ ಠಾಣೆಗೆ ದೂರು ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

 ಪ್ರಕರಣದ ತನಿಖೆ ವೇಳೆ ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಸಂಬಂಧಿಸಿದ ಮಹಿಳೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಯಾದ ಗಂಡು ಭ್ರೂಣ ಜೀವಂತವಾಗಿರಲಿಲ್ಲ. ಸಂಬಂಧಿತ ಮಹಿಳೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಡಾ. ವಿಶ್ವನಾಥ್ ಸಿಂಪಿ ಮಾಹಿತಿ ನೀಡಿದ್ದಾರೆ.