ವಿರಾಜಪೇಟೆ:ಮದುವೆ ಸಂಭ್ರಮದಲ್ಲಿ ಸ್ನೇಹಿತರ ಜೂಜಾಟ: ನಾಲ್ಕು ಲಕ್ಷ ರೂ ವಶಕ್ಕೆ
ವಿರಾಜಪೇಟೆ:ನ:17: ಮದುವೆ ಸಂಭ್ರಮದ ನೆಪದಲ್ಲಿ ಅಕ್ರಮವಾಗಿ ಹಣ ಮಾಡುವ ಉದ್ದೇಶದಿಂದ ಕೆಲವು ಮಂದಿ ಸ್ನೇಹಿತರು ಅಕ್ರಮವಾಗಿ ಪಣಕ್ಕೆ ಹಣಯಿಟ್ಟು ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು ನಾಲ್ಕು ಲಕ್ಷ ರೂಗಳನ್ನು ವಶಕ್ಕೆ ಪಡೆದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಮೊಗರಗಲ್ಲಿಯಲ್ಲಿರುವ ಕಲ್ಯಾಣ ಮಂಟಪ ಒಂದರಲ್ಲಿ ಮದುವೆ ಕಾರ್ಯವಿತ್ತು. ಮದುವೆ ಶುಭ ಸಮಾರಂಭದ ಮಧ್ಯೆ ಕೊಠಡಿಯೊಂದರಲ್ಲಿ ಮದುವೆಗೆ ಬಂದ ಸ್ನೇಹಿತರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಏಕಾಏಕಿಯಾಗಿ ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿದ್ದಾರೆ.
ಜೂಜಾಟದಲ್ಲಿ ತೊಡಗಿದ್ದ ವ್ಯಕಿಗಳಿಂದ ಒಟ್ಟು 4,25,545,00 ರೂ ವಶಕ್ಕೆ ಪಡೆದಿದ್ದಾರೆ. ಅಕ್ರಮ ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವಿರಾಜಪೇಟೆ ಉಪ ವಿಭಾಗದ ಪ್ರಭಾರ ಪೊಲೀಸ್ ಉಪ ಅಧಿಕ್ಷಕರಾದ ಪಿ.ಚಂದ್ರಶೇಖರ್ ಅವರ ನಿರ್ದೇಶನದ ಮೇರೆಗೆ ವಿರಾಜಪೇಟೆ ವೃತ್ತ ನೀರಿಕ್ಷಕರಾದ ಪಿ.ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ನಗರ ಠಾಣೆಯ ಪಿ.ಎಸ್.ಐ. ಹೆಚ್.ಎಸ್. ಪ್ರಮೋದ್, ಮತ್ತು ಅಪರಾಧ ವಿಭಾಗದ ಪಿ.ಎಸ್.ಐ. ಟಿ.ಎಂ. ಕಾವೇರಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ:ಕಿಶೋರ್ ಕುಮಾರ್ ಶೆಟ್ಟಿ
