ಶಾಸಕ ಪೊನ್ನಣ್ಣ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ

Apr 13, 2026 - 12:10
Apr 13, 2026 - 12:21
 0  239
ಶಾಸಕ ಪೊನ್ನಣ್ಣ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ   ಅಭಿವೃದ್ಧಿ ಸಮಿತಿ ಸಭೆ

ವಿರಾಜಪೇಟೆ; ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ಸಿಡಿಸಿಯ ಅಧ್ಯಕ್ಷರೂ ಆಗಿರುವ ಶಾಸಕರು, ನಿಯಮಿತವಾಗಿ ನಡೆಯುವ ಈ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಕ್ರಮಗಳು ಹಾಗೂ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರು ಮಾದಂಡ ತಿಮ್ಮಯ್ಯ, ಸದಸ್ಯರು ನಾಸಿರ್ ಹಾಗೂ ಸಿಡಿಸಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0