ವಿರಾಜಪೇಟೆ:ಅಂತರ್ ಕೊಡವಕೇರಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಸಮಾರೋಪ| ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಕ್ರೀಡೆಯಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದೆ:ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ಅಂತರ್ ಕೊಡವಕೇರಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಸಮಾರೋಪ|  ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಕ್ರೀಡೆಯಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದೆ:ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ಕಾವೇರಿ ಕೊಡವಕೇರಿ, ಅಪ್ಪಯ್ಯ ಸ್ವಾಮಿ ರಸ್ತೆ ವಿರಾಜಪೇಟೆ, ಇವರ ವತಿಯಿಂದ 4ನೇ ವರ್ಷದ ಶೇಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು‌ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಭಾಗವಹಿಸಿ, ದೀಪ ಬೆಳೆಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಕಾವೇರಿ ಕೊಡವ ಕೇರಿಯವರು ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಹಾಗೂ ವಿನೂತನ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಬಣ್ಣಿಸಿದರು. ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸಹ ಕ್ರೀಡೆ, ಸೇನೆ, ಜ್ಞಾನ, ಬುದ್ಧಿವಂತಿಗೆ ಹೀಗೆ ಹಲವಾರು ವಿಷಯಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಮುಂಚೂಣಿಯಲ್ಲಿ ಇದ್ದಾರೆ.

ಹಾಗೆಯೇ ಕೊಡವ ಜನಾಂಗದವರ ಸಂಸ್ಕೃತಿಯು ಸಹ ವಿಭಿನ್ನವಾಗಿದ್ದು, ನಮ್ಮ ಆಚಾರ ವಿಚಾರಗಳು ವಿಶಿಷ್ಟ ರೀತಿಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಈ ಇತಿಹಾಸ, ಪರಂಪರೆಯನ್ನು ಪೋಷಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂತಹ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಕೊಡವ ಜನಾಂಗದವರ ಹಲವಾರು ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದು, ಕೋವಿ ವಿಷಯದಲ್ಲಿ ಪೂರಕವಾಗಿ ಆದೇಶ ಬರುವಂತೆ ನೋಡಿಕೊಂಡಿದ್ದೇನೆ. ಯುವ ಜನತೆಗೆ ಅನುಕೂಲವಾಗಲಿ ಎಂದು ಜಿಲ್ಲೆ ಹಾಗೂ ವಿರಾಜಪೇಟೆ ಕ್ಷೇತ್ರದಾದ್ಯಂತ ಕ್ರೀಡೆಯ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದರು.

 ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಕೊಡವ ಸಮಾಜದ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.