ವಿರಾಜಪೇಟೆ;ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ;ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ;ದಿ.ದೇವರಾಜು ಅರಸು ರವರ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕೊಡಗು ಜಿಲ್ಲೆ ಇವರ ವತಿಯಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡುವ ಕಾರ್ಯಕ್ರಮ ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಗೃಹ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. 

    ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಶ್ರೀ ಎ ಎಸ್ ಪೊನ್ನಣ್ಣ ರವರು ಮಹಿಳಾ ದಿನಾಚರಣೆಯ ದಿನದಂದು ಆಗಮಿಸಿದ ಎಲ್ಲಾ ಮಹಿಳೆಯರಿಗೆ ಶುಭ ಕೋರುತ್ತಾ ಹೊಲಿಗೆ ಯಂತ್ರವನ್ನು ವಿತರಿಸಿ ಶುಭ ಕೋರಿದರಲ್ಲದೆ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಸತತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಮಹಿಳಾ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್,ಮಾಜಿ ಪುರಸಭೆ ಸದಸ್ಯರು ರಾಫಿ, ಪಕ್ಷದ ಮುಖಂಡರು ಸೂರಜ್ ಹೊಸೂರು, ಅಜ್ಜಿಕುಟ್ಟಿರ ಗಿರೀಶ್, ಆಪ್ರು ರವೀಂದ್ರ, ಮೊಹಮ್ಮದ್ ಆಲಿ, ಚೆಕು, ಸಂಪನ್ ಅಯ್ಯಪ್ಪ, ವಾಸಿಮ್, ಉದಯ ಮಾದಪ್ಪ, ಮಂಜುನಾಥ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.