ವಿರಾಜಪೇಟೆ:ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ‌ ನಡೆಸಿದ ಶಾಸಕ‌‌ ಎಎಸ್ ಪೊನ್ನಣ್ಣ

Jan 3, 2026 - 20:58
 0  297
ವಿರಾಜಪೇಟೆ:ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ‌ ನಡೆಸಿದ ಶಾಸಕ‌‌ ಎಎಸ್ ಪೊನ್ನಣ್ಣ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ತಮ್ಮ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

 ಲೋಕೋಪಯೋಗಿ ಇಲಾಖೆ,ಐಟಿಡಿಪಿ, ಕೆಆರ್ ಐ ಡಿ ಎಲ್, ಸಮಾಜ ಕಲ್ಯಾಣ ಇಲಾಖೆ, ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪುರಸಭೆಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಪ್ರತಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ವರದಿ ಪಡೆದ ಮಾನ್ಯ ಶಾಸಕರು, ಅಭಿವೃದ್ಧಿಯ ಬಗ್ಗೆ ಸಮಗ್ರವಾಗಿ ಚರ್ಚಿಸಿದರು. ಇಲಾಖೆಯವರು ಪೂರ್ಣಗೊಂಡಿರುವ ಕಾಮಗಾರಿಗಳು ಹಾಗೂ ಮುಂಬರುವ ಕಾಮಗಾರಿಗಳಿಗೆ ಮಾಡಿಕೊಂಡಿರುವ ತಯಾರಿ ಬಗ್ಗೆ ವಿವರ ಪಡೆದ ಮಾನ್ಯ ಶಾಸಕರು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0