ವಿರಾಜಪೇಟೆ:ಪತ್ರಕರ್ತರ ಕಾಫಿ ಕುಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

Jan 4, 2026 - 16:05
 0  549
ವಿರಾಜಪೇಟೆ:ಪತ್ರಕರ್ತರ ಕಾಫಿ ಕುಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ವಿ ಬಾಡಗ ಗ್ರಾಮಕ್ಕೆ ಭೇಟಿ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಣ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ, ಚೇರಂಡ ಜಗನ್ ಅವರ ಕಾಫಿ ತೋಟದಲ್ಲಿ ಪತ್ರಕರ್ತರೊಂದಿಗೆ ಕಾಫಿ ಕುಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾಫಿ ಕುಯ್ಲು ಸ್ಪರ್ಧೆ ಕಾರ್ಯಕ್ರಮಕ್ಕೆ ಶಾಸಕರು ಶುಭ ಕೋರಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷಾರದ ಅನು ಕಾರ್ಯಪ್ಪ, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಂಘದ ನಿರ್ದೇಶಕಿ ಸವಿತಾ ರೈ, ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಸದಸ್ಯರು, ಪದಾಧಿಕಾರಿಗಳು, ಕೊಲ್ಲಿರ ಬೋಪಣ್ಣ ,ಉಮೇಶ್ ಕೆಂಚಮಯ್ಯ,ಕಂಜಿತಂಡ ಗಿಣಿ ಮೊಣ್ಣಪ್ಪ, ಕಂಜಿತಂಡ ಪೂವಣ್ಣ, ಕೊಂಗಂಡ ಕಾಶಿ ಕಾರ್ಯಪ್ಪ, ತೀತಿಮಾಡ ಸಧಾ, ಕೊಂಗಂಡ ರಚನ್ ಉತಪ್ಪ, ಚೆಂದಂಡ ರಂಜಿತ್, ಚೇಮಿರ ಧವನ್ ದೇವಯ್ಯ, ತೀತಿಮಾಡ ಬೋಸು ಅಯ್ಯಪ್ಪ, ಚೇಮಿರ ಪ್ರಕಾಶ್ ಪೂವಯ್ಯ, ಚಂದುರ ಜಗನ್ ಬೋಪಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0