Kodagu

ವಿರಾಜಪೇಟೆ: ಐತಿಹಾಸಿಕ ಜನೋತ್ಸವ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಸಭೆ

admincoorgdaily

ವಿರಾಜಪೇಟೆ: ಐತಿಹಾಸಿಕ ಜನೋತ್ಸವ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಸಭೆ

ವಿರಾಜಪೇಟೆ: ಐತಿಹಾಸಿಕ ಜನೋತ್ಸವ ಸಮಿತಿ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳೊಂದಿದೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸಭೆ ನಡೆಸಿದರು.

  ಉತ್ಸವ ಸಮಿತಿಯ ಅಧ್ಯಕ್ಷರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯಧ್ಯಕ್ಷ ಶಬರೀಶ್ ಶೆಟ್ಟಿ ಉಪಸ್ಥಿತಿಯಲ್ಲಿ, ಮುಂಬರುವ ಗಣೇಶ ಚತುರ್ಥಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ವಿರಾಜಪೇಟೆ ಪುರಸಭೆ ವ್ಯಾಪ್ತಿಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಅದರ ಯಶಸ್ವಿ ನಡುವಳಿಗಳ ಬಗ್ಗೆ ಹಾಗೂ ವಿವಿಧ ಕಾರ್ಯಕ್ರಮಗಳ ರೂಪವೇಷಗಳ ಬಗ್ಗೆ ಈ ಸಭೆಯಲ್ಲಿ ವಿಸ್ತರಿಸಿ ಚರ್ಚಿಸಲಾಯಿತು. ಸುಸೂತ್ರವಾಗಿ ಗಣೇಶೋತ್ಸವವನ್ನು ನಡೆಸುವ ನಿಟ್ಟಿನಲ್ಲಿ ಮಾನ್ಯ ಶಾಸಕರು ಹಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರಲ್ಲದೆ ವಿವಿಧ ಸಮಿತಿಗಳ ಪ್ರಸ್ತಾವನೆಗಳನ್ನು ಕೂಲಂಕುಶವಾಗಿ ಆಲಿಸಿದರು.

   ಬಹು ದಿನಗಳ ಕಾಲ ನಡೆಯುವ ಗಣೇಶೋತ್ಸವವನ್ನು ಯಾವ ರೀತಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನಿಭಾಯಿಸುವ ಬಗ್ಗೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಯಶಸ್ವಿಗೊಳಿಸುವ ಕುರಿತು ಗಂಭೀರವಾಗಿ ಚರ್ಚೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಯನಾ ಜಗತ್, ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಮಾಜಿ ಉಪಾಧ್ಯಕ್ಷರು ಫಸಿಯಾ ತಬ್ಸುಂ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.