ವಿರಾಜಪೇಟೆ:ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ;, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಪ್ರಯುಕ್ತ, ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ವಿರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ತೆರಳಿ, ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ವಂದಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪ್ರಮುಖರಾದ ಸತೀಶ್, ಮಹಾದೇವ, ಉದಯ, ರಾಜ, ಮಂಜುನಾಥ್ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.