ವಿರಾಜಪೇಟೆ: ಕೊಡವ ಕ್ರಿಕೆಟ್ ಅಕಾಡೆಮಿ ಆಯೋಜಿಸಿದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶಾಸಕ ಎ‌ಎಸ್‌ ಪೊನ್ನಣ್ಣ

ವಿರಾಜಪೇಟೆ: ಕೊಡವ ಕ್ರಿಕೆಟ್ ಅಕಾಡೆಮಿ ಆಯೋಜಿಸಿದ   ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶಾಸಕ ಎ‌ಎಸ್‌ ಪೊನ್ನಣ್ಣ

ವಿರಾಜಪೇಟೆ:ಕೊಡವ ಕ್ರಿಕೆಟ್ ಅಕಾಡೆಮಿಯವರು ವಿರಾಜಪೇಟೆಯಲ್ಲಿ ಆಯೋಜಿಸಿದ, ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜಗತ್ತಿನಾದ್ಯಂತ ಹಾಗೂ ಭಾರತದಲ್ಲಿ ವಿಶೇಷವಾಗಿ ಕ್ರಿಕೆಟ್ ಕ್ರೀಡೆಗೆ ವಿಶೇಷವಾದ ಸ್ಥಾನಮಾನ ಇದೆ. ಎಷ್ಟೋ ಜನ ಯುವಕರು ಈ ಆಟದಿಂದಾಗಿ ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾನೆ. ಕೊಡಗಿನ ಹಲವಾರು ಕ್ರಿಕೆಟ್ ಪಟುಗಳು ವಿಶ್ವವಿಖ್ಯಾತಿ ಗಳಿಸಿರುವುದು ನಮ್ಮ ನಾಡಿನ ಹೆಮ್ಮೆಯ ವಿಷಯ. ವಿರಾಜಪೇಟೆಯಲ್ಲಿ ನಡೆಯುತ್ತಿರುವ ಈ ಕ್ರಿಕೆಟ್ ಪಂದ್ಯಕ್ಕೆ ಯಶಸ್ಸನ್ನು ಕೋರುತ್ತಾ ಈ ಪಂದ್ಯಾವಳಿಯಲ್ಲಿ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ನಾಡು ಗುರುತಿಸುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರು ಕಾರ್ಸನ್ ಕಾರ್ಯಪ್ಪ, ವಿರಾಜಪೇಟೆ ಕೊಡವ ಸಮಾಜ ಅಧ್ಯಕ್ಷರು ಅಮುಣ್ಣಿಚಂಡ ರವಿ ಉತ್ತಪ್ಪ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಸುರೇಶ್ ನಂಜಪ್ಪ, ಚಿತ್ರ ನಟ ಕುತಂಡ ತಾರಕ್ ಪೊನ್ನಪ್ಪ, ಕೊಡವ ಚಿತ್ರ ನಟಿ ಕಾಣತಂಡ ಬೀನಾ ಜಗದೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.