ವಿರಾಜಪೇಟೆ: ಪ್ರಗತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣ
ವಿರಾಜಪೇಟೆ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಶಿಸ್ತು ಮತ್ತು ಸೇವಾ ಮನೋಭಾವದಿಂದ ನಿರ್ವಹಿಸುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಪ್ರಗತಿ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರು ಕರೆ ನೀಡಿದರು.
ವಿರಾಜಪೇಟೆಯ ಪ್ರಗತಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ವಿದ್ಯಾರ್ಥಿ ನಾಯಕರಿಗೆ ಅಧಿಕಾರ ಹಾಗೂ ಜವಾಬ್ದಾರಿಗಳನ್ನು ಅಧಿಕೃತವಾಗಿ ಹಸ್ತಾಂತರಿಸುವ ಈ ಸಮಾರಂಭವು ಕೇವಲ ಹುದ್ದೆ ನೀಡುವ ಕಾರ್ಯಕ್ರಮವಲ್ಲ. ನಾಯಕತ್ವ ಕೌಶಲ್ಯ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಘಟ್ಟವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು. ಶಿಕ್ಷಕರನ್ನು ಸದಾ ಗೌರವದಿಂದ ಕಾಣಬೇಕು. ಉತ್ತಮ ಶಿಕ್ಷಣ ನೀಡಿ ನಿಮ್ಮ ಭವಿಷ್ಯವನ್ನು ರೂಪಿಸುವ ಶಿಕ್ಷಕರೇ ನಿಮ್ಮ ಮೊದಲ ಆದರ್ಶ ವ್ಯಕ್ತಿಗಳು ಎಂದು ಸಲಹೆ ನೀಡಿದರು.
ಪ್ರೌಢಶಾಲೆ ವಿದ್ಯಾರ್ಥಿ ನಾಯಕನಾಗಿ ಮಹಮ್ಮದ್ ಬುಲಾನಿ,ವಿದ್ಯಾರ್ಥಿನಿ ನಾಯಕಿ ಆರ್ಯಾ.ಎಂ.ಜೆ,ಉಪ ವಿದ್ಯಾರ್ಥಿ ನಾಯಕ ಜೋಯೆಲ್ ಜಾರ್ಜ್.ಎ.ಎಸ್,ಉಪ ವಿದ್ಯಾರ್ಥಿನಿ ನಾಯಕಿ ರಿದ್ಧಾ ಫಾತಿಮಾ.ಎ.ಎಚ್ ,ಕ್ರೀಡಾ ನಾಯಕ ಯಶಸ್ ಗೌಡ.ಬಿ.ಕೆ, ಶಿಸ್ತು ನಾಯಕರಿಥಿಕ್.ವಿ.ಎ,ಸಾಂಸ್ಕೃತಿಕ ನಾಯಕರಾಗಿ, ಗಯಾನ್ ಮತ್ತು ತನಯ್.ಬಿ.ಎಸ್ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ರಿಥಿಕ್.ಕೆ.ವಿ, ವಿದ್ಯಾರ್ಥಿನಿ ನಾಯಕಿಯಾಗಿ ರಿಫಾ ಫಾತಿಮಾ.ಎಂ, ಇದೇ ವೇಳೆ ಹಸಿರು, ಹಳದಿ, ಕೆಂಪು, ನೀಲಿ ತಂಡಗಳಿಗೆ ಪ್ರತ್ಯೇಕ ನಾಯಕ/ನಾಯಕಿಯರನ್ನು ಸಹ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥೆ ಸುಜಾತ ತಿಮ್ಮಯ್ಯ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ---
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
