ವಿರಾಜಪೇಟೆ ತಾ.ಪಂ.ಕಾರ್ಯಪಡೆ ಸಮಿತಿ ಸಭೆ

May 20, 2026 - 10:07
 0  244
ವಿರಾಜಪೇಟೆ ತಾ.ಪಂ.ಕಾರ್ಯಪಡೆ ಸಮಿತಿ ಸಭೆ

ಮಡಿಕೇರಿ ಮೇ.19 :-ಮುಂಗಾರು ಆರಂಭ ಹಿನ್ನೆಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಟಾಸ್ಕ್ ಪೆÇೀರ್ಸ್ ಸಮಿತಿ ಹಾಗೂ ಗ್ಯಾರಂಟಿ ಸಮಿತಿ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.  

ಮಾನ್ಸೂನ್ ಪ್ರಾರಂಭವಾಗುತ್ತಿದ್ದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲು ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಯಿತು.   

ಮಳೆಗಾಲ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ, ಆ ದಿಸೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಶಾಂತ್ ಅವರು ಸಲಹೆ ಮಾಡಿದರು. 

ಸೆಸ್ಕ್ ಇಲಾಖೆಯವರು ಮುಂಜಾಗ್ರತಾ ಕ್ರಮ ವಹಿಸಿ, ಹೆಚ್ಚಾಗಿ ಮಳೆ ಬೀಳುವ ಗ್ರಾ.ಪಂ.ಗಳಲ್ಲಿ ಸೆಸ್ಕ್ ಇಲಾಖೆಯಿಂದ ಜಂಗಲ್ ಕಟ್ಟಿಂಗ್ ಮಾಡಿಸಿಕೊಳ್ಳಿ ಹಾಗೂ ಅಂಗನವಾಡಿ ಮತ್ತು ಶಾಲೆಗಳ ಸುತ್ತಾ-ಮುತ್ತಾ ಇರುವಂತಹ ಅಪಾಯಕಾರಿ ಮರಗಳನ್ನು ತೆರೆವುಗೊಳಿಸಿ ಯಾವುದೇ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮವಹಿಸಿ ಎಂದು ವಿರಾಜಪೇಟೆ ತಾ.ಪಂ.ಇ.ಒ.ರಾಜೇಶ್ ಕೆ.ಆರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚರಂಡಿಗಳನ್ನು ಸ್ವಚ್ಛತೆ ಕಾಪಾಡಲು ಕ್ರಮವಹಿಸಿ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ರೀತಿಯಲ್ಲಿ ನೋಡಿಕೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು. 

ಗೃಹ ಜ್ಯೋತಿ-ತಾಲ್ಲೂಕಿನಲ್ಲಿ ಶೇ.99 ಪ್ರಗತಿಯಾಗಿದೆ. ಮಳೆಗಾಲಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸೆಸ್ಕ್ ಇಲಾಖೆಯಿಂದ ಮಾಡಿಕೊಂಡಿದ್ದು, ವ್ಯವಸ್ಥಿತವಾಗಿ ನಿಭಾಯಿಸಲು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಸೆಸ್ಕ್ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕಿನ ವಿವಿಧ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಸಮಸ್ಯೆಗಳು ಇದ್ದು, ಈ ಕುರಿತು ಕ್ರಮವಹಿಸಲು ತಿಳಿಸಲಾಯಿತು. 

ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಶೇ.98 ಪ್ರಗತಿಯಾಗಿದು, ಫೆಬ್ರವರಿ ತಿಂಗಳವರೆಗೆ ಹಣ ಪಾವತಿಯಾಗಿದ್ದು, ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಮೃತಪಟ್ಟವರಿಗೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಭೆಯಲ್ಲಿ ಚರ್ಚಿಸಲಾಯಿತು. 

ಸಭೆಯಲ್ಲಿ ಶಕ್ತಿ ಯೋಜನೆ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಕುರಿತು ಚರ್ಚಿಸಲಾಯಿತು. ಪೆÇನ್ನಂಪೇಟೆ ಗ್ಯಾರಂಟಿ ಸಮಿತಿಯ ಸರ್ವ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರಾ.ಕು) ಭಾಸ್ಕರ್, ಸಹಾಯಕ ನಿರ್ದೇಶಕರಾದ (ಗ್ರಾ.ಉ) ಶ್ರೀನಿವಾಸ್ ಎಂ.ಡಿ, ಸಹಾಯಕ ಲೆಕ್ಕಾಧಿಕಾರಿಗಳಾದ ಗಣೇಶ್ ಕುಮಾರ್, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0