ವಿರಾಜಪೇಟೆ ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ: ಮೊದಲ ಹಂತದ ಕಾಮಗಾರಿಗೆ ನವೆಂಬರ್ ತಿಂಗಳಲ್ಲಿ ಸಿ.ಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ವಿರಾಜಪೇಟೆ ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ: ಮೊದಲ ಹಂತದ ಕಾಮಗಾರಿಗೆ ನವೆಂಬರ್ ತಿಂಗಳಲ್ಲಿ ಸಿ.ಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಮಡಿಕೇರಿ:ವಿರಾಜಪೇಟೆ ತಾಲೂಕು ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೆ 400 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರಕಾರದ ಅನುಮೋದನೆ ನೀಡಿದ್ದು, ಆಸ್ಪತ್ರೆಯ ಮೊದಲ ಹಂತದ ಕಾಮಗಾರಿಗೆ 95.06 ಕೋಟಿ ಅನುದಾನ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 250 ಹಾಸಿಗೆಗಳ ಆಸ್ಪತ್ರೆಯ ಕಾಮಗಾರಿ ಶೀಘ್ರ ಆರಂಭವಾಗಲಿದ್ದು, ನವೆಬರ್ ನಲ್ಲಿ ಮುಖ್ಯಮಂತ್ರಿಗಳಿದ ಕಾಮಗಾರಿಗೆ ಭೂಮಿಪೂಜೆ ನಡೆಯಲಿದೆ. ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳು ಜನರಿಗೆ ದೊರಕಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.