ವಿರಾಜಪೇಟೆ: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು

Jun 15, 2026 - 19:27
Jun 18, 2026 - 12:38
 0  2.5k
ವಿರಾಜಪೇಟೆ:  ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು

ವಿರಾಜಪೇಟೆ: ವಿರಾಜಪೇಟೆ ಸಮೀಪದ ರೆಸಾರ್ಟ್‌ನ  ಈಜುಕೊಳದಲ್ಲಿ ಬಿದ್ದು ಗೋವದಿಂದ ಬಂದಿದ್ದ ಪ್ರವಾಸಿಗನೊಬ್ಬ ಮೃತಪಟ್ಟ ದುರ್ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ಗೋವದಿಂದ ವಿರಾಜಪೇಟೆ ಸಮೀಪದ ರೆಸಾರ್ಟ್‌ಗೆ ಆಗಮಿಸಿದ್ದ ಮನೋಜ್ ಆನಂದ್, 57 ವರ್ಷ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದ ಮನೋಜ್ ಆನಂದ್, ಈಜುಕೊಳಕ್ಕೆ ಇಳಿದ ಸಂದರ್ಭದಲ್ಲಿ ಉಸಿರಾಟದ ತೊಂದರೆ ಉಂಟಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

 ಘಟನೆಯಿಂದ ದಿಗ್ಬ್ರಾಂತರಾದ ಕುಟುಂಬ ಸದಸ್ಯರು ಕೂಡಲೇ ರೆಸಾರ್ಟ್ ಸಿಬ್ಬಂದಿ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 4
Wow Wow 3