ವಿರಾಜಪೇಟೆ: ವಿಷ ಸೇವಿಸಿದ್ದ ಮಹಿಳೆ ಸಾವು

ವಿರಾಜಪೇಟೆ: ವಿಷ ಸೇವಿಸಿದ್ದ ಮಹಿಳೆ ಸಾವು

ವೀರಾಜಪೇಟೆ:ಬೋಯಿಕೇರಿ ನಿವಾಸಿ ನವೀನ ಅವರ ಪತ್ನಿ ಭವ್ಯ (32) ತಾ.11ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ್ದು, ವೀರಾಜಪೇಟೆ ಮತ್ತು ಜಿಲ್ಲಾ ಆಸ್ಪತ್ರೆ ಮಡಿಕೇರಿಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.