ವಿರಾಜಪೇಟೆ; ಪ್ರಗತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 5, 2026 - 19:18
 0  124
ವಿರಾಜಪೇಟೆ; ಪ್ರಗತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿರಾಜಪೇಟೆ;ಪ್ರಗತಿ ಶಾಲೆಯಲ್ಲಿ ವಿರಾಜಪೇಟೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ವ್ಯವಸ್ಥಾಪಕಿ ಸುಷ್ಮಾ ತಿಮ್ಮಯ್ಯ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಮರಗಳ ಅಗತ್ಯತೆ ಹಾಗೂ ಪರಿಸರ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ಭಾಷಣ, ಅಭಿನಯ ಗೀತೆ ಹಾಗೂ ಜಾಗೃತಿ ನೃತ್ಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಹಾಗೂ ಸ್ವಚ್ಚತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0