ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

ವಿರಾಜಪೇಟೆಯ: ಅಂಬೇಡ್ಕರ್ ಭವನದಲ್ಲಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಈ ಪ್ರಗತಿ ಪರಿಶೀಲನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸ ರಾಜು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜಿಲ್ಲಾ ಅಧಿಕಾರಿ ವೆಂಕಟ ರಾಜ್, ಜಿ ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಯೊಂದು ಇಲಾಖೆಯ ವರದಿ ತರಿಸಿಕೊಂಡ ಮಾನ್ಯರು, ಕೂಲಂಕುಶವಾಗಿ ಪ್ರತಿ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.