ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು:ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಒತ್ತಾಯ

ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು:ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಒತ್ತಾಯ
ಮಂಜುನಾಥ್

ವಿರಾಜಪೇಟೆ:ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷರಾದ ಪಿ.ಎ ಮಂಜುನಾಥ್ ಆಗ್ರಹಿಸಿದ್ದಾರೆ.

 ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹರಡುವ ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು. ಇಂಥವರ ವಿರುದ್ಧ ಹೊಸ ಕಾನೂನು ಜಾರಿಯಾಗಬೇಕೆಂದು ಒತ್ತಾಯಿಸಿದರು. ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.