ವಿರಾಜಪೇಟೆ;ಡೊನೇಷನ್ ಹಾವಳಿ ವಿರೋಧಿಸಿ, ಎಸ್‌ಎಫ್‌ಐ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರ ಹೋರಾಟ

May 7, 2026 - 16:20
 0  385
ವಿರಾಜಪೇಟೆ;ಡೊನೇಷನ್ ಹಾವಳಿ ವಿರೋಧಿಸಿ, ಎಸ್‌ಎಫ್‌ಐ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರ ಹೋರಾಟ

ವಿರಾಜಪೇಟೆ: ಡೊನೇಷನ್ ಹಾವಳಿ ವಿರೋಧಿಸಿ, 'ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ'ವನ್ನು ರಚಿಸುವಂತೆ, ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ನೀಡಿದ ಹೋರಾಟ ಕರೆಗೆ ಓಗೊಟ್ಟು ವಿರಾಜಪೇಟೆ ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

   ಬಳಿಕ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಅವರು, 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಿರುತ್ತಾರೆ.

ಒಂದೆಡೆ ರಾಜ್ಯಾದ್ಯಂತ ಅಣಬೆಗಳಂತೆ ಖಾಸಗಿ ಶಾಲೆಗಳು ತಲೆ ಎತ್ತುತ್ತಿವೆ. ಮತ್ತೊಂದೆಡೆ ರಾಜ್ಯದಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈಗಾಗಲೆ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೊನೇಷನ್ ಹಣವನ್ನು ಮನಬಂದತೆ ವಸೂಲಿ ಮಾಡಲು ಮುಂದಾಗಿದ್ದಾರೆ. ಬಡ ಹಿಂದುಳಿದ, ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ಅಸಾಧ್ಯವಾಗುತ್ತಿದೆ.

  ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್.ಟಿ.ಇ ಕಾಯ್ದೆ ಜಾರಿಯಾದರೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗೂ ಆಕ್ರಮವಾಗಿ ಟ್ಯೂಷನ್, ಟ್ಯೂಟರಿಯಲ್ಸ್, ಅನಧೀಕೃತವಾಗಿ ಅSಅ ಅಃSಅ ಕೆಲವು ಪ್ರತಿಷ್ಟಿತ ಪಿ.ಯು.ಸಿ ಕಾಲೇಜುಗಳು ಎಇಇ, ಓಇಇಖಿ, ಅಇಖಿ ಹೆಸರಿನಲ್ಲಿ ಶಾಲಾ ಕಾಲೇಜುಗಳು ನಡೆಯುತ್ತಿವೆ ಎಂದರು.

   ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10್ಠ16 ಸೈಜಿನಲ್ಲಿ ಫ್ಲೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ. ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿ.ಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶೀಲನೆ ಮಾಡಿರುವುದಿಲ್ಲ.

   ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ಪುಸ್ತಕ ಸಾಮಾಗ್ರಿಗಳನ್ನು ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್‌ಗಳನ್ನು ಮುಚ್ಚತಕ್ಕದ್ದು ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ ಸಭೆ ಸೇರಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸುತ್ತದೆ ಎಂದರು.

    ಮನವಿಯಲ್ಲಿ ಡೊನೆಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ' (ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮಗಳ ಮೂಲಕ ಮತ್ತು ಬಿತ್ತಿಪತ್ರ. ಕರಪತ್ರಗಳ ಮೂಲಕ ಪ್ರಚಾರ ಪಡಿಸಬೇಕು. ಶಿಕ್ಷಣ ಸಂಸ್ಥೆಗಳು ಪ್ರತಿತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಡೊನೆಷನ್ ನಿಯಂತ್ರಣಕ್ಕೆ 'ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ ರಚನೆ ಕುರಿತು 15 ದಿನಗಳ ಒಳಗಾಗಿ ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಜಂಟಿಸಭೆ ಕರೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ- ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ದಂಡ ಮತ್ತು ಶಿಕ್ಷೆಗೊಳಪಡಿಸಬೇಕು. ಡೋನೆಷನ್ ಹಾವಳಿ ತಡೆಗಟ್ಟಿ ಡೇರಾ ಕಮೀಟಿ ರಚಿಸಿ. ಅನಧಿಕೃತ ಖಾಸಗಿ ಶಾಲಾ ಕಾಲೇಜುಗಳನ್ನು ನಿಯಂತ್ರಿಸಿ. ಅನಧಿಕೃತ ಟ್ಯೂಷನ್ ಸೆಂಟರ್‌ಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿದ್ದಾರೆ.

     ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತçದ್, ಎಸ್‌ಎಫ್‌ಐ ರಾಜ್ಯ ಜಂಟಿ ಕಾರ್ಯದರ್ಶಿ ವಿನುಷ್ ರಮಣ, ಅನಂತರಾಜ್, ಮುಖಂಡರಾದ ರಮೇಶ್ ವಿರಾಪೂರ, ಮಂಜುನಾಥ ಡಗ್ಗಿ, ಸಾದಿಕ್, ಚಂದ್ರಶೇಖರ್, ರಾಘವೇಂದ್ರ, ದಿಲೀಪ್, ಮಿಥುನ್ ಎಮ್, ಸಾಕ್ಷಿ ಎಸ್, ಗೌತಮಿ ಎಮ್, ಎ.ಸಿ. ಸಾಬು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0