ವಿರಾಜಪೇಟೆ: ಖಾಸಗಿ ಬಸ್ಸ್ ಕಾರ್ಮಿಕರ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಖಾಸಗಿ ಬಸ್ಸ್ ಕಾರ್ಮಿಕರ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ:ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಆಯುಧ ಪೂಜೆಯಲ್ಲಿ, ಎಲ್ಲಾ ಸಿಬ್ಬಂದಿ ವರ್ಗದವರಿಗೆ ಭಾಗವಹಿಸಿದ ಶಾಸಕರು, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಎಲ್ಲರ ಸುರಕ್ಷತೆಗಾಗಿ ಜಗನ್ಮಾತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.