ವಿರಾಜಪೇಟೆ:ಗೌರಿ‌ ಕೆರೆ ವ್ಯಾಪ್ತಿಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

Dec 23, 2025 - 11:12
 0  243
ವಿರಾಜಪೇಟೆ:ಗೌರಿ‌ ಕೆರೆ ವ್ಯಾಪ್ತಿಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಗೌರಿ ಕೆರೆಯಲ್ಲಿ ಶಾಸಕರ 8ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ನೆರವೇರಿಸಿದರು.  

   ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಮಾನ್ಯ ಶಾಸಕರು ಈ ಹಿಂದೆ ಗೌರಿ ಕೆರೆಯ ಈ ಭಾಗಕ್ಕೆ ರಸ್ತೆಗೆ ಅನುದಾನ ಒದಗಿಸಿದ್ದರು. ಇದೀಗ ಪೂರ್ಣಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರುಗಳು, ಪಕ್ಷದ ಹಿರಿಯ-ಕಿರಿಯ ಮುಖಂಡರು, ಮುಖ್ಯ ಅಧಿಕಾರಿ,ಸ್ಥಳೀಯರ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0