ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ವದೈವತ ಪ್ರಾಥಮಿಕ ಶಾಲೆಯ ವಿಸ್ಮಿತ್

ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ವದೈವತ ಪ್ರಾಥಮಿಕ ಶಾಲೆಯ ವಿಸ್ಮಿತ್

ಗೋಣಿಕೊಪ್ಪ: ಸಮೀಪದ ಅರ್ವತ್ತೊಕ್ಲುವಿನ ಸರ್ವದೈವತ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ವಿಸ್ಮಿತ್ ಟಿ.ವಿ ಇತ್ತೀಚೆಗೆ ಸೋಮವಾರಪೇಟೆಯ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ , ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ ಹಾಗು ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ತರಬೇತುದಾರರಾದ ನವೀನ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.