ಮತಗಳ್ಳತನ ಜಾಗೃತಿ ಅಭಿಯಾನ ಮಡಿಕೇರಿ ಬ್ಲಾಕ್ ವ್ಯಾಪ್ತಿಯಲ್ಲಿ ನಲವತ್ತು ಸಾವಿರ ಸಹಿ ಸಂಗ್ರಹದ ಗುರಿ: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ
ಮಡಿಕೇರಿ:ದೇಶಾದ್ಯಂತ ಕಾಂಗ್ರೆಸ್ ಪಕ್ಷ ಮತಗಳ್ಳತನದ ಬಗ್ಗೆ ಜಾಗೃತರಾಗಿರಲು ಸಹಿ ಸಂಗ್ರಹದ ಅಭಿಯಾನ ನಡೆಸುತ್ತಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ನವರ ನಿರ್ದೇಶನದ ಮೇರೆಗೆ ಮಡಿಕೇರಿ ಬ್ಲಾಕ್ ವ್ಯಾಪ್ತಿಯಲ್ಲಿ 40 ಸಾವಿರ ಜನ ಮತದಾರರ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ಸ್ಪಷ್ಟ ಪಡಿಸಿದ್ದಾರೆ.
ಈಗಾಗಲೇ ಮಡಿಕೇರಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು,ಶಾಸಕದ್ವಯರಾದ ಡಾ ಮಂತರ್ ಗೌಡ, ಎ.ಎಸ್.ಪೊನ್ನಣ್ಣ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಅಭಿಯಾನಕ್ಕೆ ಚಾಲನೆ ದೊರಕಿದ್ದು ಬುಧವಾರ ದಿಂದ ಪ್ರತಿ ಬೂತ್ ಗಳಲ್ಲಿ ಮನೆ,ಮನೆಗೆ ತೆರಳಿ ಸಹಿ ಸಂಗ್ರಹಿಸಲಾಗುವುದು ಎಂದು ತಿಳಿಸಿದರು. ಪ್ರಜಾಪ್ರಭುತ್ವದ ಪ್ರತಿಯೊಂದು ಅಂಶಗಳು ಮತಶಕ್ತಿಯ ತಳಹದಿಯಲ್ಲಿ ನಿಂತಿದ್ದು ಇದರ ಅಡಿಪಾಯಕ್ಕೆ ಆತಂಕ ಎದುರಾಗಿದೆ.ಎಲ್ಲಾ ಕ್ಷೇತ್ರಗಳಲ್ಲಿ ನೈಜ ಮತದಾರರನ್ನು ನಿಗ್ರಹಿಸಲು ಮೋಸದ ಜಾಲಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ.ಇದು ಪರೋಕ್ಷವಾಗಿ ಜನರ ಧ್ವನಿಯನ್ನು ಅಡಗಿಸುವ ಷಡ್ಯಂತರವಾಗಿದೆ.
ಈ ನಿಟ್ಟಿನಲ್ಲಿ ಮತಗಳ್ಳತನ ವನ್ನು ತಡೆಯುವ ಮೂಲಕ ಪ್ರಜಾಪ್ರಭುತ್ವ ವನ್ನು ಉಳಿಸುವ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದ್ದು ಇದನ್ನು ಯಶಸ್ಸು ಗೊಳಿಸಲು ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಕಾರ್ಯಕರ್ತರು ಬದ್ದರಾಗಿದ್ದಾರೆ ಎಂದು ಹಂಸರವರು ವಿವರಣೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ,ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಉಪಸ್ಥಿತರಿದ್ದರು.