ವಯನಾಡು ಭೂಕುಸಿತ: 2 ಮೃತ್ಯು, 10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ
ವಯನಾಡು:ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಕನಿಷ್ಠ 10 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.
ಮಲಪ್ಪುರಂ ಮತ್ತು ವಯನಾಡು ನಡುವೆ ಸಂಪರ್ಕ ಕಲ್ಪಿಸುವ ಅನಕ್ಕೊಂಪೊಯಿಲ್-ಮೇಪ್ಪಾಡಿ ಸುರಂಗ ರಸ್ತೆ ಯೋಜನೆಯ ಕಾಮಗಾರಿ ಸ್ಥಳದ ಸಮೀಪದ ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ಈ ಭೂಕುಸಿತ ಸಂಭವಿಸಿದೆ. ಘಟನೆ ನಡೆದಾಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಸ್ಥಳದಲ್ಲೇ ಇದ್ದರು ಎಂದು ತಿಳಿದುಬಂದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸೇರಿದಂತೆ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಈಗಾಗಲೇ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದ ಸಮೀಪ ವಾಸಿಸುತ್ತಿದ್ದ ಕುಟುಂಬಗಳನ್ನು ಜಿಲ್ಲಾಡಳಿತ ಸ್ಥಳಾಂತರಿಸಲು ಪ್ರಾರಂಭಿಸಿದೆ. ಸ್ಥಳಾಂತರಗೊಂಡವರಿಗೆ ಮೇಪ್ಪಾಡಿಯಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
5
Wow
0

