ದೇಶಕ್ಕೆ ಸ್ವಾತಂತ್ರ್ಯಕ್ಕಾಗಿ ಮಹನೀಯರ ತ್ಯಾಗ,ಬಲಿದಾನವನ್ನು ನಾವೆಲ್ಲರೂ ಸ್ಮರಿಸಬೇಕು: ಶಾಸಕ ಎ.ಎಸ್ ಪೊನ್ನಣ್ಣ

ದೇಶಕ್ಕೆ ಸ್ವಾತಂತ್ರ್ಯಕ್ಕಾಗಿ ಮಹನೀಯರ ತ್ಯಾಗ,ಬಲಿದಾನವನ್ನು  ನಾವೆಲ್ಲರೂ ಸ್ಮರಿಸಬೇಕು: ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಪುರಸಭಾ ವ್ಯಾಪ್ತಿಯಲ್ಲಿ, ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲ್ಪಟ್ಟ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ‌ನವರು ಭಾಗವಹಿಸಿದರು

. ರಾಷ್ಟ್ರ ಧ್ವಜಾರೋಹಣ ಬಳಿಕ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು, ಭಾರತೀಯರ ಪಾಲಿಗೆ ಇಂದು ಅತ್ಯಂತ ಶುಭದಿನ. ಪರಕೀಯರ ಆಳ್ವಿಕೆಯನ್ನು ಹೊಡೆದೋಡಿಸಿ ಭಾರತೀಯರೇ ನಮ್ಮ ದೇಶವನ್ನು ಆಳಲು ಆರಂಭಿಸಿದ ಐತಿಹಾಸಿಕ ದಿನ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರೆಲ್ಲ ನೀಡಿದ ತ್ಯಾಗ, ಬಲಿದಾನವನ್ನು ನಾವೆಲ್ಲರೂ ಸ್ಮರಿಸಲೇಬೇಕು. ಅವರೆಲ್ಲರಿಗೂ ವಂದಿಸುತ್ತಾ, ಸ್ಮರಿಸುತ್ತಾ, ಅವರ ಕೆಚ್ಚೆದೆಯ ಹೋರಾಟವನ್ನು ನೆನೆದು ಕೊಳ್ಳುತ್ತಾ, ನಾವು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರೆ ಅದಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತದೆ ಎಂದು ಬಣ್ಣಿಸಿದರು.

 ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಆಹ್ವಾನಿತ ಗಣ್ಯರು, ಪುರಸಭೆಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.