ಕೂಡಿಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ/ಕೂಡಿಗೆ, ಜು.11: ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಸ್ವಾಗತ ಸಮಾರಂಭ ನಡೆಯಿತು .
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಹಂಡಂಗಿ ನಾಗರಾಜ್, ವಿದ್ಯಾರ್ಥಿಗಳು ಇಷ್ಟಪಟ್ಟು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಓದಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ತಂದೆ ತಾಯಿ/ ಪೋಷಕರು ತಮಗಾಗಿ ಬಹಳಷ್ಟು ಶ್ರಮ ಪಡುತ್ತಿರುತ್ತಾರೆ ಅವರಿಗೆ ತಾವೇನಾದರೂ ಪ್ರತಿಫಲ ನೀಡುವುದಾದರೆ ಅದು ನಿಮ್ಮ ವ್ಯಕ್ತಿತ್ವ ಹಾಗೂ ನಿಮ್ಮ ಫಲಿತಾಂಶ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು. ಹೇಳಿದರು .
ಸ್ವಾಗತ ಕಾರ್ಯಕ್ರಮ ಕುರಿತು ಮಾತನಾಡಿದ ಹಿರಿಯ ಉಪನ್ಯಾಸಕರಾದ ಎಂ.ಟಿ. ರಮೇಶ್ , ಪ್ರಥಮ ಬಾರಿಗೆ ನಮ್ಮ ಕಾಲೇಜಿಗೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ತಮ್ಮ ವ್ಯಾಸಂಗವನ್ನು ಮುಂದುವರಿಸಬೇಕು. ತಂದೆ ತಾಯಿ, ಪೋಷಕರು ತಮ್ಮನ್ನು ಕಷ್ಟಪಟ್ಟು ಕಾಲೇಜಿಗೆ ಕಳಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪೋಷಕರಿಗೆ ಗೌರವವನ್ನು ಕೊಡುವುದರ ಜತೆಗೆ ಉತ್ತಮ ಕಲಿಕೆಯೊಂದಿಗೆ ಉತ್ತಮ ಫಲಿತಾಂಶ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತರಬೇಕು ಎಂದು ತಿಳಿಸಿದರು.
ಉಪನ್ಯಾಸಕ ಹನುಮರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿಗಳು ದಾರಿ ತಪ್ಪಿ ಹೋಗುತ್ತಿದ್ದಾರೆ ಅವರಿಗೆ ಉತ್ತಮವಾದ ಪರಿಸರ ನಿರ್ಮಾಣವಾಗಬೇಕಾಗಿದೆ ಹಾಗಾಗಿ ವಿದ್ಯಾರ್ಥಿಗಳು ದಾರಿ ತಪ್ಪದೇ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು. .ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿಕಟ್ಟೆ, ಲಿನೆಟ್ ಟಿ ಫರ್ನಾಲಿಸ್, ಸೂಸಿ ತಂಗಚ್ಚನ್, ಆನಂದ್ ,ರವೀಶ್ ,ಅನುಷಾ, ಗೌತಮಿ, ಆಶಾ , ಮುಂತಾದ ಉಪನ್ಯಾಸಕರು ಇದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು
What's Your Reaction?
Like
1
Dislike
0
Love
0
Funny
0
Angry
0
Sad
0
Wow
0

