ಭಾಗಮಂಡಲ ಕಾವೇರಿ ಕಾಲೇಜಿನಲ್ಲಿ ಧರ್ಮಸ್ಥಳ ಸಂಘದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
admincoorgdaily

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕಿನ ಭಾಗಮಂಡಲ ಕಾರ್ಯಕ್ಷೇತ್ರದ ವತಿಯಿಂದ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರಾಂಶುಪಾಲರಾದ ಹೇಮಂತ್ ಅವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಬಗ್ಗೆ, ಸ್ವಾಸ್ಥ್ಯ ಸಮಾಜದ ನಿರ್ಮಾಣದ ಬಗ್ಗೆ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ,ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಭಾಗಮಂಡಲ ವಲಯ ಮೇಲ್ವಿಚಾರಕರಾದ ಸಂತೋಷ್,ಸೇವಾಪ್ರತಿನಿಧಿ ವೆಂಕಟರಮಣ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.