ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಣೆ

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್  ಆ್ಯಂಡ್ರೆ ರಸೆಲ್  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಣೆ

ಕಿಂಗ್ಸ್ಟನ್: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಆಲ್ ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯ ಎರಡು ಪಂದ್ಯಗಳ ನಂತರ, ನಿವೃತ್ತಿಯಾಗುವುದಾಗಿ ಪ್ರಕಟಿಸಿದ್ದಾರೆ. 37 ವರ್ಷದ ರಸೆಲ್ ಆಸ್ಟ್ರೇಲಿಯಾ ತಂಡದ ವಿರುದ್ಧ ಐದು ಪಂದ್ಯಗಳ ಸರಣಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದ್ದು, ಜಮೈಕಾದ ಸಬೀನಾ ಪಾರ್ಕ್ ನ ತಮ್ಮ ತವರು ಮೈದಾನದಲ್ಲಿ ನಡೆಯಲಿರುವ ಮೊದಲ ಎರಡು ಪಂದ್ಯಗಳ ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ. ಅವರ ನಿವೃತ್ತಿಯ ನಿರ್ಧಾರವನ್ನು ಗೌರವಾರ್ಪಣೆ ಪೋಸ್ಟ್ ನೊಂದಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಕೂಡಾ ದೃಢಪಡಿಸಿದೆ.