ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿ, ಅತ್ತೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ

Oct 24, 2025 - 16:00
 0  1.4k
ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿ, ಅತ್ತೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ
Photo credit: The Indian express

ಬೆಳಗಾವಿ, ಅ. 24: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಗಂಡ ಹಾಗೂ ಕುಟುಂಬಸ್ಥರು ಕ್ರೂರ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡದಲ್ಲಿ ನಡೆದಿದೆ. 

ಪತ್ನಿಯನ್ನು ಮಾತ್ರವಲ್ಲ, ಆಕೆಯ ರಕ್ಷಣೆಗೆ ಬಂದ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಗೊಳಗಾದ ಮಹಿಳೆ ರಾಜಶ್ರೀ ಹೊಸಮನಿ (25) ಸುಮಾರು ಐದು ವರ್ಷಗಳ ಹಿಂದೆ ರಾಕೇಶ್ ಹೊಸಮನಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಇದೆ. ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯ ಅಕ್ರಮ ಸಂಬಂಧ ಬಯಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು. ಹಿರಿಯರ ಮಧ್ಯಸ್ಥಿಕೆಯಿಂದ ಇಬ್ಬರು ಮತ್ತೆ ಸಂಸಾರ ನಡೆಸುತ್ತಿದ್ದರು. ರಾಕೇಶ್ ತನ್ನ ವರ್ತನೆಯನ್ನು ಬದಲಿಸದೆ ಅಕ್ರಮ ಸಂಬಂಧ ಮುಂದುವರೆಸಿದ್ದಾ ಎಂದು ಪತ್ನಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ಆರೋಪಿಸಿ ರಾಜಶ್ರೀ ತವರು ಮನೆ ಸೇರಿದ್ದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅತ್ತೆ-ಮಾವ ಕರೆ ಮಾಡಿ ಮನೆಗೆ ಬರಲು ಹೇಳಿದ್ದು, ಅದಕ್ಕೆ ಸ್ಪಂದಿಸಿ ಬಂದಿದ್ದ ರಾಜಶ್ರೀ ಮತ್ತೆ ಕ್ರೌರ್ಯಕ್ಕೆ ಗುರಿಯಾಗಿದ್ದಾರೆ.

 “ನನ್ನ ಗಂಡ ಸರಿಯಿಲ್ಲ” ಎಂದು ಪತ್ನಿ ಹೇಳಿದ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ವಾಗ್ವಾದ ಉಂಟಾಗಿ, ನಂತರ ಗಂಡ ರಾಕೇಶ್ ಹಾಗೂ ಅವನ ಸಹೋದರ ಸೇರಿಕೊಂಡು ರಾಜಶ್ರೀ ಮೇಲೆ ಹಲ್ಲೆ ನಡೆಸಿದ್ದಾರೆ.

ಸಾರ್ವಜನಿಕವಾಗಿಯೇ ಇಬ್ಬರು ಮಹಿಳೆಯರ ಮೇಲೆ ನಡೆದ ಹಲ್ಲೆ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮಸ್ಥರು ಯಾರೂ ಸಹಾಯಕ್ಕೆ ಮುಂದಾಗದೆ ಮೂಕಪ್ರೇಕ್ಷಕರಾಗಿದ್ದರು. ಆರೋಪಿಗಳು ಮಹಿಳೆಯರನ್ನು ಕಾಲಿನಿಂದ ಒದ್ದು, ಮುಖ ಸೇರಿದಂತೆ ದೇಹದ ಹಲವು ಭಾಗಗಳಿಗೆ ಹಲ್ಲೆ ನಡೆಸಿದ್ದಾರೆ.

ಮಗಳ ರಕ್ಷಣೆಗೆ ಬಂದ ತಾಯಿಯ ಮೇಲೂ ಕ್ರೌರ್ಯ ತೋರಲಾಗಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಆ್ಯಂಬುಲೆನ್ಸ್ ಮುಖಾಂತರ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ತತ್ತರಿಸಿದ ರಾಜಶ್ರೀ ಹಾಗೂ ಕುಟುಂಬಸ್ಥರು, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. 

ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

What's Your Reaction?

Like Like 0
Dislike Dislike 1
Love Love 0
Funny Funny 3
Angry Angry 0
Sad Sad 2
Wow Wow 0