ಕಾಡಾನೆ ದಾಳಿ; ವ್ಯಕ್ತಿಯೊಬ್ಬರಿಗೆ ಗಂಭೀರ ಸ್ವರೂಪದ ಗಾಯ; ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು

Jan 22, 2026 - 14:23
Jan 22, 2026 - 19:19
 0  1.2k
ಕಾಡಾನೆ ದಾಳಿ; ವ್ಯಕ್ತಿಯೊಬ್ಬರಿಗೆ  ಗಂಭೀರ ಸ್ವರೂಪದ ಗಾಯ;  ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು

ಸಿದ್ದಾಪುರ; ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ದಾಳಿಯಿಂದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 ಗ್ರಾಮದ ದೇವರಾಜ್ ಅವರು ಮಠ ಗ್ರಾಮದಿಂದ ರೇಷನ್ ಅಂಗಡಿಗೆ ತೆರಳುತ್ತಿದ್ದ ವೇಳೆ, ತೋಟದೊಳಗಿಂದ ದಿಢೀರನೆ ಪ್ರತ್ಯಕ್ಷವಾದ ಕಾಡಾನೆ ಏಕಾಏಕಿ ದಾಳಿ ಮಾಡಲು ಯತ್ನಿಸಿದೆ. ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡ ದೇವರಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ವಿರಾಜಪೇಟೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಶಶಿ ಹಾಗೂ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಅರಣ್ಯ ಇಲಾಖೆ ಕೂಡಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0