ಪಳ್ಳಕೆರೆಯಲ್ಲಿ ಕಾಡಾನೆ ದಾಳಿ: ಕಾರ್ಮಿಕ ಮಹಿಳೆಗೆ ಗಂಭೀರ ಗಾಯ
ಸಿದ್ದಾಪುರ: ಪಳ್ಳಕೆರೆ ವ್ಯಾಪ್ತಿಯಲ್ಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿಗೆ ಮುಂದಾದ ಪರಿಣಾಮ ಓರ್ವ ಮಹಿಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಮಹಿಳೆಯ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಕಾರ್ಮಿಕರು ಎದ್ದುಬಿದ್ದು ಓಡಿದ್ದಾರೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪಳ್ಳಕೆರೆ ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾರ್ಮಿಕರು ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
3
Wow
0
