ಹಸುವನ್ನು ನೋಡಲು ಹೋದ ಕಾರ್ಮಿಕನ ಮೇಲೆ ಕಾಡಾನೆ ದಾಳಿ
admincoorgdaily

ಸಿದ್ದಾಪುರ:ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಯಡೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿದೆ. ಹಸುವನ್ನು ನೋಡಲು ತೋಟಕ್ಕೆ ತೆರಳಿದ್ದ ಕಾರ್ಮಿಕ ಅಣ್ಣಪ್ಪ(40) ಮೇಲೆ ಕಾಡಾನೆ ದಾಳಿ ಮಾಡಿದೆ. ದಾಳಿಯಲ್ಲಿ ಅಣ್ಣಪ್ಪನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ವಲಯ ಅರಣ್ಯಾಧಿಕಾರಿ ಶಿವರಾಂ ಅವರು ಗಾಯಗೊಂಡ ಕಾರ್ಮಿಕನನ್ನು ಕರೆತಂದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.