ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ:ಪ್ರಯಾಣಿಕನಿಗೆ ಗಾಯ

ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ:ಪ್ರಯಾಣಿಕನಿಗೆ  ಗಾಯ

ಸಿದ್ದಾಪುರ: ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿ, ಪ್ರಯಾಣಿಕ ಗಾಯಗೊಂಡ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಇಂಜಿಲಗೆರೆಯಲ್ಲಿ ನಡೆದಿದೆ.ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಫಿ ತೋಟದಿಂದ ರಸ್ತೆಗೆ ಬಂದು ಆಟೋ ಮೇಲೆ ಕಾಡಾನೆ ದಾಳಿ ಮಾಡಿದ್ದು, ಗಾಯಗೊಂಡ ಇಂಜಿಲಗೆರೆಯ ಪ್ರದೀಪ್ ಸಿದ್ದಾಪುರ ಆಸ್ಪತ್ರೆಗೆ ದಾಖಲಾಗಿದ್ದಾನೆ‌.