ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಕಾಡಾನೆ:ಪ್ರಾಣಾಪಾಯದಿಂದ ಪಾರಾದ ಶಿಕ್ಷಕ
ಸಿದ್ದಾಪುರ:-ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಿಬ್ಬಂದಿ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿದೆ.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಮಾಲ್ದಾರೆ, ಅವರೆಗುಂದ,ದುಬಾರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಮೀಕ್ಷೆ ನಿಯೋಜಿಸಿದ್ದ ಸಿಬ್ಬಂದಿ ಗೋಣಿಕೊಪ್ಪಲು ಪ್ರೌಢಶಾಲೆ ಅಧ್ಯಾಪಕ ಶಿವರಾಂ ಮೇಲೆ ಬಸವನಹಳ್ಳಿ ಬಳಿ ಕಾಡಾನೆಯೊಂದು ದಾಳಿಗೆ ಯತ್ನಿಸಿದೆ. ಭಯಗೊಂಡ ಶಿಕ್ಷಕ ಬೈಕ್ ಅನ್ನು ತಿರುಗಿಸುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ಗಾಯಗೊಂಡಿದ್ದು.ಬೈಕ್ ಅನ್ನು ಬಿಟ್ಟು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಕ್ಷಣಕ್ಕೆ ಸ್ಥಳಿಯ ನಿವಾಸಿಗಳು ಸ್ಪಂದಿಸಿ ಗಾಯಾಳುವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ್ ಅಮ್ಮತ್ತಿ ಕಂದಾಯ ಪರಿವೀಕ್ಷರ ಅನಿಲ್ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹೇಶ್ ಭೇಟಿನೀಡಿ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು. ವನ್ಯ ಜೀವಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶದಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಬೆಂಗಾವಲಿಗೆ ನಿಯೋಜಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.