ಕಕ್ಕಬ್ಬೆ ವಯಕೋಲ್ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಮನೆಯ ತಡೆಗೋಡೆ ದ್ವಂಸ

Dec 26, 2025 - 20:30
 0  572
ಕಕ್ಕಬ್ಬೆ  ವಯಕೋಲ್ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಮನೆಯ ತಡೆಗೋಡೆ ದ್ವಂಸ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಯಕೋಲ್ ಗ್ರಾಮದ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಮನೆಯೊಂದರ ಅಂಗಳಕ್ಕೆ ಪ್ರವೇಶಿಸಿದ ಕಾಡಾನೆ ಮನೆಯ ತಡೆಗೋಡೆ ತುಳಿದು ಧ್ವಂಸಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ವಯಕೋಲ್ ಗ್ರಾಮದ ನಿವಾಸಿ ಅಹಮದ್ ಹಾಜಿ ಎಂಬುವವರ ಮನೆಯ ಅಂಗಳಕ್ಕೆ ಬುಧವಾರ ಮಧ್ಯರಾತ್ರಿ ಲಗ್ಗೆ ಇಟ್ಟ ಕಾಡಾನೆ ಮನೆಯ ಹಿಂಬದಿಯ ತಡಗೋಡೆ ತುಳಿದು ಧ್ವಂಸಗೊಳಿಸಿದ್ದು ನಷ್ಟ ಸಂಭವಿಸಿದೆ. ಈ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಗ್ರಾಮದ ತೋಟಗಳಲ್ಲಿ ಕಾಫಿ ಕೊಯ್ಲುಕಾರ್ಯ ಪ್ರಾರಂಭವಾಗಿದ್ದು ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಹಾಗೂ ಬೆಳೆಗಾರರು ತೋಟಗಳಿಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ಬೆಳಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0