ವನ್ಯಜೀವಿಗಳ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಸಹಕಾರ ನೀಡಲಾಗುವುದು‌;ಸಂಸದ ಯದುವೀರ್ ಒಡೆಯರ್

ವನ್ಯಜೀವಿಗಳ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಸಹಕಾರ ನೀಡಲಾಗುವುದು‌;ಸಂಸದ ಯದುವೀರ್ ಒಡೆಯರ್

ಗೋಣಿಕೊಪ್ಪ; ಕೊಡಗು ಜಿಲ್ಲೆಯಲ್ಲಿ ಆನೆ - ಮಾನವ ಸಂಘರ್ಷ ಪರಿಹಾರಕ್ಕೆ ಆಗ್ರಹಿಸಿ ಕೊಡಗು ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ತಿತಿಮತಿಯಲ್ಲಿ ಮೈಸೂರು-ಗೋಣಿಕೊಪ್ಪ ಹೆದ್ದಾರಿ ತಡೆ ನಡೆಯುತ್ತಿದ್ದ ಸ್ಥಳಕ್ಕೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯ ಕಾಫಿ ತೋಟಗಳಲ್ಲಿ ಜನರು ಭಯದಿಂದ ಬದುಕು ಸಾಗಿಸುತ್ತಿದ್ದಾರೆ. ದೇಶದಾದ್ಯಂತ ಹೋಲಿಸಿದಲ್ಲಿ‌ ಕರ್ನಾಟಕದಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದೆ. ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಸಹಕಾರ ನೀಡಲಾಗುವುದು‌ ಎಂದರು.