ಕೊಡಗು ಜಿಲ್ಲೆಯಲ್ಲಿ ಗಾಳಿ-ಮಳೆಯಾರ್ಭಟ: ನಾಳೆಯೂ (ಜುಲೈ 26 ಶನಿವಾರ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ನಾಳೆ(ಶನಿವಾರ ಜುಲೈ 26) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.