ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.14 ರಂದು ಗೆಲುವು ಸಾಧಿಸಿದ ತಂಡಗಳು

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.14 ರಂದು ಗೆಲುವು ಸಾಧಿಸಿದ ತಂಡಗಳು

ಮಡಿಕೇರಿ ಏ.14 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು.

ಮೈದಾನ 1;

ತೆನ್ನಿರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆನ್ನಿರ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಯಾವುದೇ ವಿಕೆಟ್ ನಷ್ಟವಿಲ್ಲದೆ 4.4 ಓವರ್ ಗಳಲ್ಲಿ 55 ರನ್ ಗಳನ್ನು ಸೇರಿಸಿ ಗೆಲುವಿನ ನಗೆ ಬೀರಿತು.

ಮಿನ್ನಂಡ ಮತ್ತು ಚೌರಿರ ತಂಡಗಳ ನಡುವಿನ ಹಣಾಹಣಿಯಲ್ಲಿ ಸೂಪರ್ ಓವರ್ ನಲ್ಲಿ ಚೌರಿರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಿಣ್ಣಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ಮತ್ತು ಇದನ್ನು ಬೆನ್ನಟ್ಟಿದ ಚೌರಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಸಮಬಲವಾದ ಹಿನ್ನೆಲೆಯಲ್ಲಿ ನಡೆದ ಸೂಪರ್ ಓವರ್ ನಲ್ಲಿ ಚೌರಿರ 1 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 20 ರನ್ ಗಳನ್ನು ಸೇರಿಸಿತು. ಮಿಣ್ಣಂಡ 1 ವಿಕೆಟ್ ನಷ್ಟಕ್ಕೆ 18 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.

ಕರ್ತಚ್ಚಿರ ಮತ್ತು ಬಾರಿಯಂಡ ನಡುವಿನ ಪಂದ್ಯದಲ್ಲಿ ವಾಕ್ ಓವರ್ ನಿಂದ ಬಾರಿಯಂಡ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.

ಉಡುವೆರ ಮತ್ತು ಮೇಪಾಡಂಡ ತಂಡಗಳ ನಡುವಿನ ಪಂದ್ಯದಲ್ಲಿ ಉಡುವೆರ 7 ವಿಕೆಟ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೇಪಾಡಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಉಡುವೆರ 5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು.

ಅಜ್ಜಮಕ್ಕಡ ಮತ್ತು ಮುಂಡಚಾಡಿರ ನಡುವಿನ ಪಂದ್ಯದಲ್ಲಿ ಮುಂಡಚಾಡಿರ 10 ವಿಕೆಟ್ ಗಳಿಂದ ಜಯ ಗಳಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಜ್ಜಮಕ್ಕಡ 6 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 19 ರನ್ ಗಳನ್ನಷ್ಟೇ ಸೇರಿಸಿತು. ಮುಂಡಚಾಡಿರ ಕೇವಲ 1.3 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 24 ರನ್ ಗಳನ್ನು ಗಳಿಸಿ ಜಯಭೇರಿ ಬಾರಿಸಿತು.

ಅಣ್ಣಳಮಾಡ (ಪೂಕಳ) ಮತ್ತು ಪಳಂಗoಡ ತಂಡಗಳ ನಡುವಿನ ಪಂದ್ಯದಲ್ಲಿ ಅಣ್ಣಳಮಾಡ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಳಂಗoಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಗಳಿಸಿತು. ಅಣ್ಣಳಮಾಡ 3.1 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 63 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.

ಪಾಸುರ ಮತ್ತು ಮಂಡೇಪoಡ ನಡುವಿನ ಪಂದ್ಯದಲ್ಲಿ ಮಂಡೇಪoಡ 8 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಸುರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಮಂಡೇಪoಡ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.

ಮೈದಾನ 2;

ಅಪ್ಪುಮಣಿಯಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಪ್ಪುಮಣಿಯಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಲ್ಲಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿತು. ಅಪ್ಪುಮಣಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಗೆಲುವು ಕಂಡಿತು.

ಕoಗoಡ ಮತ್ತು ಚೆನಿಯಪಂಡ ನಡುವಿನ ಪಂದ್ಯದಲ್ಲಿ ಕಂಗಡ ತಂಡ 19 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಂಗoಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಸೇರಿಸಿತು. ಚೆನಿಯಪಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.

ಕಾನತAಡ ಮತ್ತು ಮುಕ್ಕಾಟಿರ (ಪುಲಿಕೋಟ್) ತಂಡಗಳ ನಡುವಿನ ಪಂದ್ಯದಲ್ಲಿ ಕಾನತಂಡ 6 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾನತಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಸೋಲು ಕಂಡಿತು.

ಮೂಕಳೇರ ಮತ್ತು ಅರೆಯಡ ನಡುವಿನ ಪಂದ್ಯದಲ್ಲಿ ಮೂಕಳೇರ 30 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೂಕಳೇರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 105 ರನ್ ಗಳನ್ನು ಗಳಿಸಿತು. ಅರೆಯಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 75 ರನ್ ಗಳನ್ನಷ್ಟೇ ಸೇರಿಸಿ ಸೋಲು ಅನುಭವಿಸಿತು.

ಮುಕ್ಕಾಟಿರ (ಅರಪಟ್ಟು) ಮತ್ತು ಮಂಡುವoಡ ನಡುವಿನ ಪಂದ್ಯದಲ್ಲಿ ಮಂಡುವoಡ 54 ರನ್ ಗಳ ಅಂತರ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವoಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 23 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು.

ಕಳಕoಡ ಮತ್ತು ತಾತಂಡ ನಡುವಿನ ಪಂದ್ಯದಲ್ಲಿ ಕಳಕಂಡ ವಾಕ್ ಓವರ್ ಮೂಲಕ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.

ಸಿದ್ದಂಡ ಮತ್ತು ಪೊರುಕೊಂಡ ನಡುವಿನ ಹಣಾಹಣಿಯಲ್ಲಿ ಸಿದ್ದಂಡ 6 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪೊರುಕಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಸೇರಿಸಿತು. ಸಿದ್ದಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.