ಬಿಲ್ಲವ ಹಾಗೂ ಬಂಟ ಸಮಾಜದ ಅವಹೇಳನೆ:ಮಹಿಳೆ ಬಂಧನ

Jun 12, 2026 - 09:28
 0  1.2k
ಬಿಲ್ಲವ ಹಾಗೂ ಬಂಟ ಸಮಾಜದ ಅವಹೇಳನೆ:ಮಹಿಳೆ ಬಂಧನ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ವೈರಲ್ ಆದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳ ಪರಿಶೀಲನೆ, ತಾಂತ್ರಿಕ ಮಾಹಿತಿ ಸಂಗ್ರಹ ಸೇರಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

What's Your Reaction?

Like Like 6
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0