ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ! 

Jan 3, 2026 - 11:35
 0  3.1k
ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ! 

ಮುಂಬೈ, ಜ. 2: ಹೊಸ ವರ್ಷದ ಸಂಭ್ರಮಾಚರಣೆಯ ನೆಪದಲ್ಲಿ ತನ್ನ ಮನೆಗೆ ಪ್ರೇಮಿಯನ್ನು ಆಹ್ವಾನಿಸಿದ್ದ ವಿವಾಹಿತ ಮಹಿಳೆ, ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಂತಾಕ್ರೂಜ್ ಪೂರ್ವದ ಜಂಬ್ಲಿಪಾದದಲ್ಲಿರುವ ಮಹಿಳೆಯ ನಿವಾಸದಲ್ಲಿ ಜನವರಿ 1ರಂದು ಬೆಳಗಿನ ಜಾವ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ 45 ವರ್ಷದ ವ್ಯಕ್ತಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿತ ಮಹಿಳೆ ಹಾಗೂ ಗಾಯಗೊಂಡ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಪರಸ್ಪರ ಪರಿಚಯಸ್ಥರಾಗಿದ್ದು, ಅವರ ನಡುವೆ ಅಕ್ರಮ ಸಂಬಂಧವಿತ್ತು. ಮಹಿಳೆ ತನ್ನನ್ನು ಮದುವೆಯಾಗುವಂತೆ ಪದೇಪದೇ ಒತ್ತಾಯಿಸುತ್ತಿದ್ದರೂ, ಆ ವ್ಯಕ್ತಿ ಅದಕ್ಕೆ ನಿರಾಕರಿಸಿದ್ದನು. ಆತನಿಗೆ ಈಗಾಗಲೇ ಪತ್ನಿ ಹಾಗೂ ಮಕ್ಕಳಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ಇಬ್ಬರ ನಡುವೆ ಕಲಹ ಉಂಟಾಗಿದ್ದು, ನವೆಂಬರ್ 2025ರಿಂದ ಆತ ಮಹಿಳೆಯೊಂದಿಗೆ ಸಂಪರ್ಕ ಕಡಿದುಕೊಂಡು ತನ್ನ ಸ್ವಗ್ರಾಮಕ್ಕೆ ತೆರಳಿದ್ದ. ನಂತರ ಮಹಿಳೆಯ ಒತ್ತಾಯದ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದಲ್ಲಿ ಆತ ಮುಂಬೈಗೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷದ ಸಂಭ್ರಮದ ನೆಪದಲ್ಲಿ ಮಹಿಳೆ ಆತನನ್ನು ಮನೆಗೆ ಕರೆಸಿಕೊಂಡು, ಬಳಿಕ ಕೋಪದ ಆವೇಶದಲ್ಲಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 1
Love Love 1
Funny Funny 0
Angry Angry 0
Sad Sad 1
Wow Wow 1